ಮರದ ರೆಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ಗಂಭೀರ

Prasthutha|

ಜೋಧ್’ಪುರ: ಮರದ ರೆಂಬೆ ಬಿದ್ದು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

- Advertisement -

ಈ ಕುರಿತ ವೀಡಿಯೋ ವ್ಯಾಪಕ ವೈರಲಾಗಿದ್ದು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮೂವರು ಯುವಕರ ಮೇಲೆ ಹಠಾತ್ ಮರದ ರೆಂಬೆ ಬೀಳುತ್ತಿರುವುದು ವೀಡಿಯೋದಲ್ಲಿ ಕಾಣಬಹುದು. ಎಲ್ಲರನ್ನೂ ಅಚ್ಚರಿಗೊಳಿಸುವ ಈ ವಿಡಿಯೋ ರಾಜಸ್ಥಾನದ ಜೋಧ್​ಪುರದಲ್ಲಿ ನಡೆದಿದ್ದು ಎಂದು ಹೇಳಲಾಗುತ್ತಿದೆ.

ರಸ್ತೆ ಬದಿಯಲ್ಲಿದ್ದ ಮರದಿಂದ ಅದರ ಕೊಂಬೆ ಇದ್ದಕ್ಕಿದ್ದಂತೆ ಆ ಸಮಯದಲ್ಲಿ ರಸ್ತೆಯಲ್ಲಿ ಹಾದು ಹೋಗುತ್ತಿದ್ದ ಮೂವರ ತಲೆಯ ಮೇಲೆ ಬೀಳುತ್ತದೆ. ಇದರಿಂದ ಮೂವರು ಯುವಕರು ಕೆಳಗೆ ಬಿದ್ದಿದ್ದಾರೆ, ಇದನ್ನು ನೋಡಿದ ಸ್ಥಳೀಯರು ತಕ್ಷಣ ಮುಂದೆ ಓಡಿ ಬಂದು ಮರದ ಕೊಂಬೆಯಿಂದ ಅವರನ್ನು ಹೊರತೆಗೆಯುತ್ತಿರುವುದು ವೀಡಿಯೋದಲ್ಲಿ ಕಂಡುಬಂದಿದೆ.

- Advertisement -

ಇದೇ ವೇಳೆ ಸ್ಕೂಟಿಯಲ್ಲಿ ತೆರಳುತ್ತಿದ್ದ ಮೂವರು ಯುವಕರು ಹೆಲ್ಮೆಟ್ ಧರಿಸದೇ ಇರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಳೆಗಾಲದ ಆರಂಭವಾಗುತ್ತಿದ್ದು,   ಬೀಸುತ್ತಿರುವ ಬಿರುಗಾಳಿಯಿಂದಾಗಿ ಏಕಾಏಕಿ ಮರದ ರೆಂಬೆಗಳು ತುಂಡಾಗಿ ಬೀಳುವ ಘಟನೆಗಳು ಹೆಚ್ಚಾಗುತ್ತಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ರಸ್ತೆಯಲ್ಲಿ ವಾಹನಗಳಲ್ಲಿ ಸಂಚರಿಸುವಾಗ ಸಂಚಾರ ನಿಯಮಗಳನ್ನು ಪಾಲಿಸಬೇಕಾಗಿದೆ.

Join Whatsapp