ಬೆಂಗಳೂರು: ಅನುಮತಿಯಿಲ್ಲದೇ ಹೈಕೋರ್ಟ್ ಆವರಣದಲ್ಲಿ ವೀಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ಸಮುದಾಯಗಳ ನಡುವೆ ಕಲಹ ಸೃಷ್ಟಿಸಲು ಯತ್ನಿಸಿದ ಆರೋಪದಡಿ ಯೂಟ್ಯೂಬ್ ಚಾನೆಲ್ ವೊಂದರ ಮೇಲೆ ಎಫ್ ಐ ಆರ್ ದಾಖಲಾಗಿದೆ.
‘ಕರ್ನಾಟಕ ಹೈಕೋರ್ಟ್ ನಲ್ಲಿ ನಮಾಝ್’ ಎಂಬ ಶೀರ್ಷಿಕೆ ನೀಡಿ ಯೂಟ್ಯೂಬ್ ಮತ್ತು ಫೇಸ್ ಬುಕ್ ಪೇಜ್ ನಲ್ಲಿ ವೀಡಿಯೋ ಹಂಚಲಾಗಿತ್ತು.
ಈ ಬಗ್ಗೆ ಹೈಕೋರ್ಟ್ ರಿಜಿಸ್ಟ್ರಾರ್ ನೀಡಿರುವ ದೂರನ್ನಾಧರಿಸಿ ಅತಿಕ್ರಮ ಪ್ರವೇಶ, ಧರ್ಮಗಳ ಮಧ್ಯೆ ದ್ವೇಷ ಹರಡಲು ಯತ್ನಿಸಿದ ಬಗ್ಗೆ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.