Home ಟಾಪ್ ಸುದ್ದಿಗಳು ಬೆಟ್ಟ ಕುರುಬ ಜನಾಂಗಕ್ಕೆ ಎಸ್ ಟಿ ಸ್ಥಾನಮಾನ| ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ಬೆಟ್ಟ ಕುರುಬ ಜನಾಂಗಕ್ಕೆ ಎಸ್ ಟಿ ಸ್ಥಾನಮಾನ| ಲೋಕಸಭೆಯಲ್ಲಿ ಮಸೂದೆ ಅಂಗೀಕಾರ

ಬೆಟ್ಟ ಕುರುಬ ಜನಾಂಗ- ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಮೂಲದ ‘ಬೆಟ್ಟ-ಕುರುಬ’ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಮಸೂದೆಯನ್ನು ಲೋಕಸಭೆ ಶುಕ್ರವಾರ ಅಂಗೀಕರಿಸಿದೆ.

ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿರುವ ಬೆಟ್ಟ-ಕುರುಬ ಸಮುದಾಯದ ಜನರು ತಮ್ಮನ್ನು ‘ಕಾಡು ಕುರುಬ’ ಸಮುದಾಯದ ಜೊತೆಗೆ ಪರಿಶಿಷ್ಟ ಪಂಗಡಗಳ ವರ್ಗಕ್ಕೆ ಸೇರಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದರು.

ಡಿಸೆಂಬರ್ 9ರಂದು ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಲಾಗಿತ್ತು. ಮಸೂದೆಯನ್ನು ರಾಜ್ಯಸಭೆಯು ಅಂಗೀಕರಿಸಿದ ನಂತರ ಮತ್ತು ನಿಯಮಗಳನ್ನು ರೂಪಿಸಿದ ಬಳಿಕ ಬೆಟ್ಟ-ಕುರುಬ ಸಮುದಾಯದ ಸದಸ್ಯರು ಪರಿಶಿಷ್ಟ ಪಂಗಡದ ಸದಸ್ಯರಿಗೆ ಒದಗಿಸುವ ಎಲ್ಲಾ ಪ್ರಯೋಜನಗಳಿಗೆ ಅರ್ಹರಾಗುತ್ತಾರೆ, ವಿಶೇಷವಾಗಿ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸಿಗಲಿದೆ.

ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ ವಿರೋಧ ಪಕ್ಷಗಳ ಹಲವು ಸದಸ್ಯರು, ಸಮುದಾಯಗಳನ್ನು ಎಸ್‌ಟಿ ಪಟ್ಟಿಗೆ ಸೇರಿಸಿದರೆ ಮಾತ್ರ ಸಾಲದು ಅವರಿಗಾಗಿ ಸರ್ಕಾರ ಕಲ್ಯಾಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Join Whatsapp
Exit mobile version