ಬಂಡಾಯ ಅಭ್ಯರ್ಥಿಗಳಿಗೆ ಶಿಸ್ತುಕ್ರಮದ ಎಚ್ಚರಿಕೆ ನೀಡಿದ TMC
Prasthutha: January 16, 2022

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಂಡಾಯ ಅಭ್ಯರ್ಥಿಗಳಿಗೆ ತೃಣಮೂಲ ಕಾಂಗ್ರೆಸ್ ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ.
ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ ಹಿರಿಯ–ಕಿರಿಯ ನಾಯಕರ ನಡುವೆ ವಾಕ್ಸಮರ ನಡೆದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ಗೆ ಮುಜುಗರ ತಂದಿರುವುದರಿಂದಾಗಿ ಈ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ವರದಿಯಾಗಿದೆ.
ಪಾಲಿಕೆ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಜನವರಿ 22ರ ಬದಲಾಗಿ ಫೆಬ್ರುವರಿ 12ರಂದು ನಡೆಸಲು ನಿರ್ಧರಿಸಿದ್ದು, ದಿನಾಂಕ ಬದಲಾವಣೆಗೊಂಡ ಬಳಿಕ ಟಿಎಂಸಿ ಪಕ್ಷದ ಹಲವು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದರು.
ಇದರ ಬೆನ್ನಲ್ಲೇ ಪಕ್ಷದ ಮುಖ್ಯ ಕಾರ್ಯದರ್ಶಿ ಪಾರ್ಥ ಚಟರ್ಜಿ, ಬಹಿರಂಗವಾಗಿ ಚುನಾವಣೆಗೆ ಸಂಬಂಧಿಸಿದ ಹೇಳಿಕೆ ನೀಡುವುದನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ. ಜತೆಗೆ ಯಾವುದೇ ವಿಚಾರವಿದ್ದರೂ ಆಂತರಿಕ ಸಮಿತಿ ಜತೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಳ್ಳಿ. ಇದನ್ನು ಪಾಲಿಸದವರ ವಿರುದ್ಧ ಶಿಸ್ತು ಸಮಿತಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
