2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ: ಮಮತಾ ಬ್ಯಾನರ್ಜಿ

Prasthutha|

ಕೋಲ್ಕತ್ತಾ: 2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಬೇರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೋಗುವುದಿಲ್ಲ ಮತ್ತು ಜನರ ಬೆಂಬಲದೊಂದಿಗೆ ಏಕಾಂಗಿಯಾಗಿ ಹೋರಾಡುತ್ತೇವೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024 ರ ಚುನಾವಣೆಯಲ್ಲಿ ನಾವು ಬೇರೆ ಯಾವುದೇ ರಾಜಕೀಯ ಪಕ್ಷಗಳೊಂದಿಗೆ ಹೋಗುವುದಿಲ್ಲ. ಜನರ ಬೆಂಬಲದೊಂದಿಗೆ ಏಕಾಂಗಿಯಾಗಿ ಹೋರಾಟ ಮಾಡುತ್ತೇವೆ. ಬಿಜೆಪಿಯನ್ನು ಸೋಲಿಸಲು ಬಯಸುವವರು ನಮಗೆ ಮತ ಹಾಕುತ್ತಾರೆ ಎಂದು ನಾನು ನಂಬುತ್ತೇನೆ ಎಂದು ಮಮತಾ ಹೇಳಿದ್ದಾರೆ.

Join Whatsapp