Home ಟಾಪ್ ಸುದ್ದಿಗಳು ತ್ರಿಪುರಾದಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಮ್ ಕೋರ್ಟ್ ನೋಟಿಸ್

ತ್ರಿಪುರಾದಲ್ಲಿ ಮುಸ್ಲಿಮ್ ವಿರೋಧಿ ಹಿಂಸಾಚಾರ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಸುಪ್ರೀಮ್ ಕೋರ್ಟ್ ನೋಟಿಸ್

ಅಗರ್ತಲಾ: ಈಶಾನ್ಯ ರಾಜ್ಯ ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಮುಸ್ಲಿಮ್ ವಿರೋಧಿ ಹಿಂಸಾಚಾರದ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸುತ್ತಿರುವ ಸುಪ್ರೀಮ್ ಕೋರ್ಟ್, ಈ ಸಂಬಂಧ ಕೇಂದ್ರ, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್, ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ಪೀಠ, ಎರಡು ವಾರಗಳೊಳಗೆ ಉತ್ತರಿಸುವಂತೆ ಉಭಯ ಸರ್ಕಾರಗಳಿಗೆ ಆದೇಶ ನೀಡಿದೆ.

ಸಾಮಾಜಿಕ ಜಾಲಾತಾಣಗಳಲ್ಲಿ ಪೋಸ್ಟ್, ಸತ್ಯಶೋಧನಾ ವರದಿ ನೀಡಿದ ಆರೋಪದಲ್ಲಿ ಸಾಮಾಜಿಕ ಹೋರಾಟಗಾರರು, ಪತ್ರಕರ್ತರು, ವಕೀಲರಿಗೆ ಯುಎಪಿಎ ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿ ವಕೀಲರಾದ ಎಹ್ತೇಷಾಮ್ ಹಶ್ಮಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ, ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

Join Whatsapp
Exit mobile version