ತ್ರಿಪುರಾ ವಿಧಾನಸಭೆ ಚುನಾವಣೆ: ಮತದಾನ ಆರಂಭ

Prasthutha|

ಅಗರ್ತಲಾ: ತ್ರಿಪುರಾ ವಿಧಾನಸಭೆ ಚುನಾವಣೆಯ ಮತದಾನ ಆರಂಭವಾಗಿದೆ.

- Advertisement -


ರಾಜ್ಯದ 60 ವಿಧಾನಸಭಾ ಕ್ಷೇತ್ರಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ.


ಮಾಹಿತಿ ಪ್ರಕಾರ ಈ ಬಾರಿಯ ಚುನಾವಣೆಯಲ್ಲಿ ಒಟ್ಟು 259 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಮಾರ್ಚ್ 2 ರಂದು ಚುನಾವಣಾ ಫಲಿತಾಂಶ ಹೊರ ಬರಲಿದೆ.



Join Whatsapp