Home ಟಾಪ್ ಸುದ್ದಿಗಳು ತ್ರಿಪುರಾ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ಹಲ್ಲೆ

ತ್ರಿಪುರಾ ಉಪಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ಹಲ್ಲೆ

ಅಗರ್ತಲಾ: ದುಷ್ಕರ್ಮಿಗಳು ಅಗರ್ತಲಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸುದೀಪ್ ರಾಯ್ ಬರ್ಮನ್ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಘಟನೆ ಉಜನ್ ಅಬ್ಜೋಯ್ ನಗರದಲ್ಲಿ ನಡೆದಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಮಾಜಿ ಸಚಿವ ಮತ್ತು ಐದು ಬಾರಿ ಶಾಸಕರಾಗಿರುವ ರಾಯ್ ಬರ್ಮನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಪಕ್ಷದ ಮುಖಂಡರೊಬ್ಬರು ತಿಳಿಸಿದ್ದಾರೆ.
ಭಾನುವಾರ ರಾತ್ರಿ ಯುವಕರ ಗುಂಪಿನಿಂದ ಹಲ್ಲೆಗೊಳಗಾದ ಕಾಂಗ್ರೆಸ್ ಕಾರ್ಯಕರ್ತ ಅಲೋಕ್ ಗೋಸ್ವಾಮಿ ಅವರ ಮನೆಗೆ ಭೇಟಿ ನೀಡಿದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದ ಬಿಜೆಪಿ ಕಾರ್ಯಕರ್ತ ಗೋಸ್ವಾಮಿ ಅವರ ಮನೆಯ ಹೊರಗೆ ಯುವಕರು ಜಮಾಯಿಸಿದ್ದರು” ಎಂದು ಅಭೋಯ್ನಗರ ಹೊರಠಾಣೆಯ ಅಧಿಕಾರಿ ಉತ್ತಮ್ ಪಾಲ್ ಹೇಳಿದ್ದಾರೆ.


ತ್ರಿಪುರಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿರಾಜಿತ್ ಸಿನ್ಹಾ ಅವರು ರಾಯ್ ಬರ್ಮನ್ ಮೇಲಿನ ದಾಳಿಯನ್ನು ಖಂಡಿಸಿದ್ದು, ಉಪ ಚುನಾವಣೆ ಪ್ರಚಾರಕ್ಕಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಭಾನುವಾರ ರಾಜ್ಯಕ್ಕೆ ಭೇಟಿ ನೀಡಿದ ನಂತರ ಪರಿಸ್ಥಿತಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
ಜೂನ್ 23ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಪ್ರಾಯೋಜಿತ ‘ಗೂಂಡಾ ರಾಜ್’ಗೆ ಮತಪತ್ರಗಳ ಮೂಲಕ ಸೂಕ್ತ ಉತ್ತರ ನೀಡುವಂತೆ ನಾನು ಮತದಾರರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ಹೇಳಿದರು.

Join Whatsapp
Exit mobile version