Home ಟಾಪ್ ಸುದ್ದಿಗಳು ತ್ರಿಪುರ ಮುಸ್ಲಿಮರ ಮೇಲೆ ಹಿಂಸಾಚಾರ: ಪಾಪ್ಯುಲರ್ ಫ್ರಂಟ್ ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ತ್ರಿಪುರ ಮುಸ್ಲಿಮರ ಮೇಲೆ ಹಿಂಸಾಚಾರ: ಪಾಪ್ಯುಲರ್ ಫ್ರಂಟ್ ನಿಂದ ರಾಷ್ಟ್ರವ್ಯಾಪಿ ಪ್ರತಿಭಟನೆ

ನವದೆಹಲಿ: ತ್ರಿಪುರದಲ್ಲಿ ಮುಸ್ಲಿಮರ ಮೇಲೆ ನಡೆದ ದೌರ್ಜನ್ಯ, ಮಸೀದಿಗಳಿಗೆ ಬೆಂಕಿ ಹಚ್ಚಿದ ಘಟನೆಗಳನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ವತಿಯಿಂದ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆಯನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.

ತ್ರಿಪುರದಲ್ಲಿ ಮುಸ್ಲಿಮರ ಮೇಲಿನ ಸರ್ಕಾರಿ ಪ್ರೇರಿತ ದಾಳಿಯನ್ನು ಕಟು ಶಬ್ದಗಳಿಂದ ಖಂಡಿಸಿದ ಪಾಪ್ಯುಲರ್ ಫ್ರಂಟ್ ನಾಯಕರು, ಸಂಘಪರಿವಾರದ ದುಷ್ಕರ್ಮಿಗಳನ್ನು ಹದ್ದು ಬಸ್ತಿನಲ್ಲಿಡಲು ತ್ರಿಪುರಾ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಲಾಯಿತು.

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆದ ದಾಳಿಯ ನೆಪದಲ್ಲಿ ಒಂದು ವಾರದಿಂದ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಮುಸಲ್ಮಾನರ ಮನೆಗಳು, ಅಂಗಡಿಗಳು ಮತ್ತು ಮಸೀದಿಗಳ ಮೇಲೆ ದಾಳಿ ನಡೆಸಿ ಸುಟ್ಟು ಹಾಕಿ ರುದ್ರ ತಾಂಡವವಾಡುತ್ತಿರುವ ಸಂಘಪರಿವಾರ ಮುಸ್ಲಿಂ ಮಹಿಳೆಯರ ಮೇಲೆಯೂ ದೌರ್ಜನ್ಯ ನಡೆಸುತ್ತಿದೆ ಎಂದು ವರದಿಯಾಗುತ್ತಿದೆ.

ರೊವಾ ಜಾಮಿಯಾ ಮಸೀದಿ ಮೇಲೆ ಹಿಂದುತ್ವವಾದಿಗಳು ದಾಳಿ ನಡೆಸಲು ಯೋಜನೆ ರೂಪಿಸಿದ್ದು, ಇಲ್ಲಿನ ಮುಸ್ಲಿಂ ಕುಟುಂಬಗಳು ಅತ್ಯಂತ ಅಭದ್ರತೆಯಲ್ಲಿ ಜೀವನ ನಡೆಸುತ್ತಿದ್ದು, ಉತ್ತರ ತ್ರಿಪುರಾದಲ್ಲಿ ಇತ್ತೀಚಿನ ದಾಳಿ ನಡೆದಿದ್ದು, ಇಸ್ಲಾಮ್ ವಿರೋಧಿ ಘೋಷಣೆಗಳೊಂದಿಗೆ ಆಗಮಿಸಿದ ದೊಡ್ಡ ಗುಂಪು ಮಸೀದಿಗಳ ಮೇಲೆ ದಾಳಿ ನಡೆಸಿದೆ.

ಈ ಕುರಿತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪೊಲೀಸರು ಸಂಘಪರಿವಾರದ ಗೂಂಡಾಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ಪಿಎಫ್ ಐ ಸರ್ಕಾರವನ್ನು ಒತ್ತಾಯಿಸಿದೆ.

Join Whatsapp
Exit mobile version