ಜನ ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದಿದ್ದಾರೆ: ತ್ರಿಪುರಾ ಹಿಂಸಾಚಾರ ಉಲ್ಲೇಖಿಸಿ ಬಿಜೆಪಿ ಶಾಸಕ ಆರೋಪ

Prasthutha|

ಅಗರ್ತಲಾ: ತ್ರಿಪುರಾದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ರಾಜ್ಯದ ಜನರು ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಡಳಿತಾರೂಢ ಬಿಜೆಪಿ ಶಾಸಕ ಸುದೀಪ್ ರಾಯ್ ಬರ್ಮನ್ ಹೇಳಿದ್ದಾರೆ.

- Advertisement -

ತ್ರಿಪುರಾ ರಾಜ್ಯ ಪೊಲೀಸ್ ಮಹಾ ನಿರ್ದೇಶಕ (ಡಿಜಿಪಿ) ರಾದ ವಿ.ಎಸ್. ಯಾದವ್ ಅವರಿಗೆ ಬರೆದ ಪತ್ರದಲ್ಲಿ ಈ ಮೇಲಿನಂತೆ ಉಲ್ಲೇಖಿಸಿದ್ದಾರೆ.

ನವೆಂಬರ್ 25 ರಂದು ನಡೆಯುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಮೊದಲು ರಾಜ್ಯದ ವಿವಿಧ ಭಾಗಗಳಲ್ಲಿ ಬಿಜೆಪಿ ಸೇರಿದಂತೆ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಜನರು ನಡೆಸುತ್ತಿರುವ ಸರಣಿ ವಾಗ್ದಾಳಿಯ ಹಿನ್ನೆಲೆಯಲ್ಲಿ ಆಡಳಿತ ಪಕ್ಷದ ಶಾಸಕನಿಂದ ಈ ಹೇಳಿಕೆ ಹೊರಬಿದ್ದಿದೆ.

- Advertisement -

ಈ ಸಂಬಂಧ ನವೆಂಬರ್ 12 ರಂದು ರಾಜ್ಯ ಡಿಜಿಪಿ ಗೆ ಬರೆದ ಪತ್ರದಲ್ಲಿ ಬರ್ಮನ್ ಅವರು, ಅಗರ್ತಲಾದ 6 ವಿಧಾನಸಭಾ ಕ್ಷೇತ್ರಗಳ ಎಂಟು ವಾರ್ಡ್ ಗಳನ್ನು ಅತ್ಯಂತ ಅತಿಸೂಕ್ಷ್ಮ ಪ್ರದೇಶವೆಂದು ಘೋಷಿಸಲು ಅವರು ಒತ್ತಾಯಿಸಿದ್ದಾರೆ.

ವಿವಿಧ ವಲಯಗಳಲ್ಲಿ ದುಷ್ಕರ್ಮಿಗಳ ಬೆದರಿಕೆಗೆ ಜನ ತತ್ತರಿಸಿರುವ ಮಧ್ಯೆ ಮತದಾರರು ಭಯದ ವಾತಾವರಣದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಬೇಕೆಂದು ಬರ್ಮನ್, ಒತ್ತಾಯಿಸಿದ್ದಾರೆ.

ತ್ರಿಪುರಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದ ಸುದೀಪ್ ರಾಯ್ ಬರ್ಮನ್ ಅವರನ್ನು 2019 ರಲ್ಲಿ ಸಂಪುಟದಿಂದ ಕೈಬಿಡಲಾಯಿತು.

Join Whatsapp