January 20, 2021

ಟಿಆರ್ ಪಿ ಹಗರಣ | ಬಾರ್ಕ್ ಮಾಜಿ ಸಿಇಒ ಪಾರ್ಥೊ ದಾಸ್ ಗುಪ್ತಾ ಜಾಮೀನು ಅರ್ಜಿ ತಿರಸ್ಕೃತ

ಮುಂಬೈ : ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿ ಬಂಧಿತರಾಗಿರುವ ಬಾರ್ಕ್ ಮಾಜಿ ಸಿಇಒ ಪಾರ್ಥೊ ದಾಸ್ ಗುಪ್ತಾ ಅವರ ಜಾಮೀನು ಅರ್ಜಿಯನ್ನು ಮುಂಬೈಯ ಸೆಶನ್ಸ್ ನ್ಯಾಯಾಲಯವೊಂದು ತಿರಸ್ಕರಿಸಿದೆ.

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಜೊತೆಗೆ ನಡೆಸಿದ್ದ ವಾಟ್ಸಪ್ ಚಾಟ್ ಗಳು ಸೋರಿಕೆಯಾದ ಬೆನ್ನಲ್ಲೇ, ಬಂಧನದಲ್ಲಿದ್ದ ದಾಸ್ ಗುಪ್ತಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದಾಸ್ ಗುಪ್ತಾ ಆರೋಗ್ಯವಾಗಿದ್ದಾರೆ, ಆದರೆ ಮುಂಬೈಯ ಜೆಜೆ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿರುವುದು ಮುಂದುವರಿಯಲಿದೆ ಎಂದು ವರದಿಗಳು ತಿಳಿಸಿವೆ.

ದಾಸ್ ಗುಪ್ತಾ ಮತ್ತು ಅರ್ನಾಬ್ ಗೋಸ್ವಾಮಿ ನಡುವಿನ ವಾಟ್ಸಪ್ ಚಾಟ್ ನಲ್ಲಿ ಸೋರಿಕೆಯಾಗಿರುವ ಮಾಹಿತಿಗಳು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ.

ಟಿವಿ ಕಾರ್ಯಕ್ರಮಗಳನ್ನು ದೇಶಭಕ್ತಿಯ ಬಗ್ಗೆ ಗಂಟೆಗಟ್ಟಲೆ ಭಾಷಣ ಬಿಗಿಯುವ ಗೋಸ್ವಾಮಿ, 40 ಮಂದಿ ಯೋಧರನ್ನು ಬಲಿ ಪಡೆದ ಪುಲ್ವಾಮ ಭಯೋತ್ಪಾದಕ ದಾಳಿಗೆ ಸಂಭ್ರಮಿಸಿದ್ದ ಬಗ್ಗೆ ಈ ವಾಟ್ಸಪ್ ಚಾಟ್ ನಲ್ಲಿ ಬಹಿರಂಗ ಗೊಂಡಿದೆ. ಅಲ್ಲದೆ, ಬಾಲಾಕೋಟ್ ಕಾರ್ಯಾಚರಣೆಗೆ ಮೂರು ದಿನ ಮುಂಚಿತವಾಗಿಯೇ ಗೋಸ್ವಾಮಿಗೆ ಮಾಹಿತಿಯಿತ್ತು ಎನ್ನಲಾಗುತ್ತಿದೆ.  

ಶೋಷಿತ, ದಮನಿತ ಸಮುದಾಯಗಳ ಧ್ವನಿಯಾಗಿರುವ ಮತ್ತು ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಮಿಡಿಯುವ ಪ್ರಸ್ತುತ ಪಾಕ್ಷಿಕಕ್ಕೆ ಚಂದಾದಾರಾಗಿರಿ. ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ