ಹೈದರಾಬಾದ್: ನಿಝಾಮಾಬಾದ್ ನ ಬಿಜೆಪಿ ಸಂಸದ ಧರ್ಮಪುರಿ ಅರವಿಂದ್ ಅವರ ನಿವಾಸದ ಮೇಲೆ ತೆಲಂಗಾಣ ರಾಷ್ಟ್ರ ಸಮಿತಿಯ ಕಾರ್ಯಕರ್ತರು ದಾಳಿ ನಡೆಸಿ, ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ಅರವಿಂದ್ ಅವರು ಇತ್ತೀಚೆಗಷ್ಟೇ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ, ಕವಿತಾ ಬಗ್ಗೆ ಅನುಚಿತವಾದ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಟಿಆರ್ ಎಸ್ ಕಾರ್ಯಕರ್ತರು ಆರೋಪಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಸಂಸದರ ಮನೆಗೆ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳಿದ್ದರು. ಇದೇ ವೇಳೆ ನಿವಾಸದ ಮೇಲೆ ದಾಳಿ ನಡೆಸಿದ ಟಿಆರ್ ಎಸ್ ಕಾರ್ಯಕರ್ತರು ಪೀಠೋಪಕರಣಗಳನ್ನು ಒಡೆದು ಹಾಕಿದ್ದಾರೆ.
ಘಟನೆಯ ವೇಳೆ ಅರವಿಂದ್ ಅವರು ಹೈದರಾಬಾದ್’ನಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.