ಫಿರೋಜಾಬಾದ್(ಉತ್ತರ ಪ್ರದೇಶ): ಗಂಡನ ಮನೆಯಿಂದ ತವರು ಮನೆಗೆ ಹೋಗುತ್ತಿದ್ದಾಗ ಗರ್ಭಿಣಿಗೆ ಟ್ರಕ್ ವೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ನಡೆದಿದೆ.
ರಾಮು ಎನ್ನುವವರು ತಮ್ಮ ಗರ್ಭಿಣಿ ಪತ್ನಿ ಕಾಮಿನಿ ಜೊತೆ ಅತ್ತೆ ಮನೆಗೆ ಬೈಕ್ ಮೇಲೆ ಹೋಗುತ್ತಿದ್ದರು. ಬರ್ತಾರಾ ಗ್ರಾಮದ ಬಳಿ ಬರುತ್ತಿದ್ದಂತೆ ಟ್ರಕ್ವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾಮಿನಿ ರಸ್ತೆ ಮಧ್ಯೆ ಬಿದ್ದಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಟ್ರಕ್ ಆಕೆಗೆ ಹಿಂದಿನಿಂದ ಗುದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಾಮಿನಿ ಸಾಯುವುದಕ್ಕೂ ಮುಂಚಿತವಾಗಿ ರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮಗು ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.