ಅಯೋಧ್ಯೆಗೆ ಪಟಾಕಿ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ!

Prasthutha|

ಅಯೋಧ್ಯೆ: ರಾಮಮಂದಿರ ಉದ್ಘಾಟನೆಗೆ ಪಟಾಕಿ ಹೊತ್ತೊಯ್ಯುತ್ತಿದ್ದ ಲಾರಿ ಬೆಂಕಿಗಾಹುತಿಯಾದ ಘಟನೆ ಉತ್ತರ ಪ್ರದೇಶದ ಪೂರ್ವ ಕೊಟ್ವಾಲಿಯ ಖರ್ಗಿ ಖೇಡಾ ಗ್ರಾಮದ ಬಳಿ ಘಟನೆ ನಡೆದಿದೆ.

- Advertisement -

ಸ್ಥಳೀಯರು ಇದನ್ನು ವೀಡಿಯೋ ಮಾಡಿ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಮ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ಸಂಭ್ರಮವನ್ನು ಕೊಂಡಾಡಲು ಟ್ರಕ್ ವೊಂದರಲ್ಲಿ ಪಟಾಕಿ ಹೊತ್ತೊಯ್ಯಲಾಗುತ್ತಿತ್ತು. ಈ ವೇಳೆ ಇದ್ದಕ್ಕಿದ್ದಂತೆ ಟ್ರಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಿಡಿ ಕ್ಷಣಾರ್ಧದಲ್ಲಿ ವ್ಯಾಪಿಸಿ ಪಟಾಕಿಗೆ ಹೊತ್ತಿಕೊಂಡಿದೆ. ಇದರಿಂದ ಬೆಂಕಿ ತೀವ್ರತೆ ಹರಡುವ ತೀವ್ರತೆ ಹೆಚ್ಚಾಹಿ, ಟ್ರಕ್ ಸಂಪೂರ್ಣ ಭಸ್ಮವಾಗಿದೆ.



Join Whatsapp