ಬೈಕ್​ಗೆ ಲಾರಿ ಡಿಕ್ಕಿ; ಮಹಿಳೆ ಮೃತ್ಯು

Prasthutha|

ಶಿವಮೊಗ್ಗ: ಬೈಕ್​ಗೆ ಲಾರಿ ಡಿಕ್ಕಿಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಬೈಪಾಸ್ ರಸ್ತೆಯಲ್ಲಿ ನಡೆದಿದೆ.

- Advertisement -

ಸಂಜಿದಾ ಮೃತ ದುರ್ದೈವಿ. ಪತಿಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿ ಹೊಡೆದಿದೆ. ಮೈ ಮೇಲೆ ಲಾರಿ ಚಕ್ರ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಶಿವಮೊಗ್ಗ ಪೂರ್ವ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp