ನವದೆಹಲಿ: ರಾಮಮಂದಿರ ಚಳವಳಿಯ ಮುಂಚೂಣಿಯಲ್ಲಿದ್ದ ನಾಯಕರಾದ ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ ಜೋಶಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇಲ್ಲ ಎಂದು ರಾಮ ಮಂದಿರ ಟ್ರಸ್ಟ್ ಸೋಮವಾರ ತಿಳಿಸಿದೆ.
‘ವಯಸ್ಸು ಹಾಗೂ ಆರೋಗ್ಯದ ಕಾರಣಗಳಿಂದಾಗಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದಂತೆ ಈ ಇಬ್ಬರು ಹಿರಿಯರನ್ನು ಕೋರಿದ್ದು, ಅದಕ್ಕೆ ಸಮ್ಮತಿಸಿದ್ದಾರೆ’ ಎಂದು ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸುದ್ದಿಗಾರರಿಗೆ ತಿಳಿಸಿದ್ದಾರೆ.