ನವದೆಹಲಿ: ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ, ಮಹಾ ವಿಕಾಸ ಅಘಾಡಿ ಸರಕಾರಕ್ಕೆ ನಾಳೆ ವಿಧಾನಸಭೆಯಲ್ಲಿ ವಿಶ್ವಾಸಮತ ದೃಢಪಡಿಸಬೇಕೆಂದು ಸೂಚಿಸಿರುವುದನ್ನು ಪ್ರಶ್ನಿಸಿ ಶಿವಸೇನೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಉದ್ಧವ್ ಠಾಕ್ರೆ ಅವರಿಗೆ ಕೋಶ್ಯಾರಿ ಅವರು ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ ಮನವಿಯನ್ನು ಆಲಿಸಿದ ನ್ಯಾ. ಜೆ ಬಿ ಪರ್ದಿವಾಲಾ ಮತ್ತು ನ್ಯಾ. ಸೂರ್ಯಕಾಂತ್ ನೇತೃತ್ವದ ದ್ವಿ ಸದಸ್ಯ ಪೀಠವು ‘ನಾಳೆ ಬೆಳಿಗ್ಗೆ 11 ಗಂಟೆಗೆ ವಿಶ್ವಾಸ ಮತವನ್ನು ಯಾಚಿಸಲೇಬೇಕು’ ಎಂದು ತೀರ್ಪು ನೀಡಿದೆ.
ಇದರಿಂದ ಮಹಾ ವಿಕಾಸ ಆಘಾಡಿ ಸರಕಾರವು ಪತನವಾಗುವ ಎಲ್ಲಾ ಸಾಧ್ಯತೆಗಳಿದ್ದು, ಕಾದುನೋಡಬೇಕಿದೆ.