ಸತ್ಯ ಆದಷ್ಟು ಬೇಗ ಹೊರಬರಲಿದೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Prasthutha|

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್ ಜಿ. ಅವರು ಎಸ್ ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.

- Advertisement -


ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಿರುವ ವಕೀಲ ಅರುಣ್, ‘ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ. ನಂತರ, ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.


ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ.

- Advertisement -



Join Whatsapp