ಯಡಿಯೂರಪ್ಪರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ: ಕಾಗೇರಿ

Prasthutha|

ಕಾರವಾರ: ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಪೋಕ್ಸೋ ಕೇಸ್ ನಲ್ಲಿ ಬಿಎಸ್ ಯಡಿಯೂರಪ್ಪಗೆ ಅರೆಸ್ಟ್ ವಾರೆಂಟ್ ನೀಡಿರುವ ವಿಚಾರವಾಗಿ ಸಂಸದ ವಿಶ್ವೇಶ್ವರ ಹೆಗಡೆ ಕಾವೇರಿ ಪ್ರತಿಕ್ರಿಯಿಸಿದ್ದಾರೆ.

- Advertisement -

ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ವಿಶ್ವಾಸವಿಟ್ಟು ಹೇಳಿಕೆಯನ್ನು ನೀಡುತ್ತಿದ್ದೇನೆ. ಆರೋಪ ಮಾಡಿದ್ದ ಮಹಿಳೆ ಪ್ರತಿನಿತ್ಯ ದೂರು ಕೊಡುತ್ತಿದ್ದವಳು. ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.

ನಾನು ಇನ್ನೇನು ಹೆಚ್ಚು ಹೇಳಲು ಬಯಸುವುದಿಲ್ಲ. ಯಡಿಯೂರಪ್ಪ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರದ ಭಾಗವಾಗಿದೆ ಎಂದು ವಿಶ್ವೇಶ್ವರ ಹೆಗ್ಡೆ ಕಾಗೇರಿ ತಿಳಿಸಿದರು.

Join Whatsapp