ಟಿಟಿ-ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Prasthutha|

ಚಿಕ್ಕಮಗಳೂರು: ವೇಗವಾಗಿ ಹೋಗುತ್ತಿದ್ದ ಕಾರು, ಟೆಂಪೋ‌ ಟ್ರಾವೆಲರ್ (ಟಿಟಿ )ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ.
ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ‌ ನಡೆದಿದೆ.

- Advertisement -

ಕಾರಿನಲ್ಲಿದ್ದ ಗಿರಿಧರ್ (46) ಮಯಂಕ್(3) ಮೃತ ರ್ದುದೈವಿಗಳು.

ಕೇರಳದಿಂದ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬರುತ್ತಿದ್ದ ಟಿ.ಟಿ ವಾಹನಕ್ಕೆ ಕಾರು ಡಿಕ್ಕಿಯಾಗಿದ್ದು, ಅದರ ರಭಸಕ್ಕೆ ಟಿಟಿ ವಾಹನ ಪಲ್ಟಿಯಾಗಿದೆ.

- Advertisement -


ಟಿ.ಟಿ ವಾಹನದಲ್ಲಿದ್ದ ಕೇರಳ ಮೂಲದ ಪ್ರವಾಸಿಗರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.


ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ‌ ಕಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp