ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುಬ್ಬಿ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಯನರಸಿಂಹಮೂರ್ತಿ (50) ಕೊಲೆಯಾದವರು ಎಂದು ತಿಳಿದು ಬಂದಿದೆ.
ನರಸಿಂಹಮೂರ್ತಿ ಹೆದ್ದಾರಿ ಪಕ್ಕದಲ್ಲಿ ಸ್ನೇಹಿತರ ಜತೆ ಚಹಾ ಕುಡಿಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗುಬ್ಬಿ ತಾಲೂಕಿನ ಪೆದ್ದನಹಳ್ಳಿಯಲ್ಲಿ ಇತ್ತೀಚೆಗೆ ಪರಿಶಿಷ್ಟ ಸಮುದಾಯಕ್ಕೆ ಸೇರಿದ್ದ ಇಬ್ಬರು ಯುವಕರನ್ನು ಕೊಲೆ ಮಾಡಲಾಗಿತ್ತು.
ತುಮಕೂರು: ದಲಿತ ಸಂಘರ್ಷ ಸಮಿತಿ ಮುಖಂಡನ ಬರ್ಬರ ಹತ್ಯೆ
Prasthutha|