ತುಮಕೂರು: ಕೆರೆಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಸಿದ್ದಾಪುರದಲ್ಲಿ ನಡೆದಿದೆ.
ಹಸೀನಾ(25), ಅಸೀಮಾ(8) ಹಾಗೂ ಆಲ್ಮಿಸಾ ಕೂಯಿಲ್(3) ಮೃತರು.
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮಧುಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.