ತುಮಕೂರು: ಲಾರಿಗಳ ನಡುವೆ ಅಪಘಾತ; ಒಬ್ಬ ವ್ಯಕ್ತಿ ಸಾವು,ಇನ್ನೊಬ್ಬರಿಗೆ ಗಾಯ

Prasthutha|

ತುಮಕೂರು: ಲಾರಿಗಳು ಪರಸ್ಪರ ಡಿಕ್ಕಿ ಹೊಡೆದ  ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ  ಘಟನೆ ಗುಬ್ಬಿ ಪಟ್ಟಣದ ಹೊರವಲಯದ ಸಿಂಗೋನಹಳ್ಳಿ ಸೇತುವೆ ಬಳಿ ಇಂದು ಬೆಳಿಗ್ಗೆ ನಡೆದಿದೆ.

- Advertisement -

ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಕೋಳಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ  ಧಾವಿಸಿದ ಪೊಲೀಸರು ವಾಹನ ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು.

Join Whatsapp