ತುಮಕೂರು | ಭೀಕರ ಅಪಘಾತಕ್ಕೆ ಒಂದೇ ಕುಟುಂಬದ ನಾಲ್ವರು ಸಾವು

- Advertisement -

ತುಮಕೂರು: ಕಾರು ಮತ್ತು ಕ್ಯಾಂಟರ್‌ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲ್ಲೂಕಿನ ಬಿದನೆಗೆರೆ ಬಳಿ ನಡೆದಿದೆ.

- Advertisement -

ಪತ್ನಿ ಶೋಭಾ (41) ಮಗಳು ದುಂಬಿ ಶ್ರೀ, ಮಗ ಭಾನು, ಕಿರಣ್ ಮೃತ ದುರ್ದೈವಿಗಳು. ವಿಷಯ ತಿಳಿಯುತ್ತಿದ್ದಂತೆ ಕುಣಿಗಲ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ಮೃತರೆಲ್ಲರೂ ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನಿವಾಸಿಗಳು. ಕುಣಿಗಲ್ ಬಳಿಯ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ-48 ರಲ್ಲಿ ಬರುವ ಬೈಪಾಸ್‌ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಕ್ಯಾಂಟರ್‌, ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

- Advertisement -


Must Read

Related Articles