ತುಂಗಭದ್ರಾ ಅಣೆಕಟ್ಟೆ: ಗೇಟ್ ಅಳವಡಿಕೆ ಕಾರ್ಯಕ್ಕೆ ಪೂಜೆ ನೆರವೇರಿಸಿದ ಸಚಿವ ಝಮೀರ್ ಅಹ್ಮದ್ ಖಾನ್

Prasthutha|

ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ ಕೊಚ್ಚಿಹೋಗಿರುವ 19ನೇ ಕ್ರಸ್ಟ್ ಗೇಟ್ ಇದ್ದ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ನಿರ್ಮಾಣ ಸಂಬಂದ ಬುಧವಾರ ಜಿಲ್ಲಾ ಉಸ್ತುವರಿ ಸಚಿವ ಝಮೀರ್ ಅಹ್ಮದ್ ಖಾನ್ ಪೂಜೆ ನೆರವೇರಿಸಿದರು.

- Advertisement -


ತಾಂತ್ರಿಕ ತಜ್ಞ ಕನ್ನಯ್ಯ ನಾಯ್ಡು ಅವರ ಜತೆ ತಡೆ ಗೇಟ್ ನಿರ್ಮಾಣ ಕುರಿತು ಚರ್ಚಿಸಿದರು. ಎರಡು ದಿನಗಳಲ್ಲಿ ಗೇಟ್ ನಿರ್ಮಾಣ ಕಾರ್ಯ ಪೂರ್ಣ ಗೊಳಿಸುವುದಾಗಿ ಇದೇ ಸಂದರ್ಭದಲ್ಲಿ ಕನ್ನಯ್ಯ ನಾಯ್ಡು ತಿಳಿಸಿದರು.


ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್, ಎಸ್ಪಿ ಶ್ರೀಹರಿಬಾಬು ಬಿ.ಎಲ್. ಇದ್ದರು.

- Advertisement -

ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮಾಡುತ್ತಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಹಾಗೂ ಯಾವುದೇ ಕಾರಣಕ್ಕೂ ನದಿಗೆ ಇಳಿಯದಂತೆ ಟಿಬಿ ಬೋರ್ಡ್ ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ಸಮೀಪಕ್ಕೆ ಮಕ್ಕಳನ್ನು, ಜಾನುವಾರುಗಳು ಹೋಗದಂತೆ ಎಚ್ಚರವಹಿಸಿ.



Join Whatsapp