ರಿಕ್ಷಾ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ತಿರುವು: ಕೊಲೆ ಮಾಡಿ ಬಾವಿಗೆ ಎಸೆದಿರುವ ದುಷ್ಕರ್ಮಿಗಳು..!

- Advertisement -

ಮರಣೋತ್ತರ ಪರೀಕ್ಷೆಯಲ್ಲಿ ದೃಢ

- Advertisement -

ಮಂಗಳೂರು: ಕಾಣೆಯಾಗಿದ್ದ ಮುಲ್ಕಿ ಕೊಳ್ನಾಡಿನ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಅವರ ಮೃತದೇಹವು ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಪತ್ತೆಯಾಗಿರುವ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಕೊಲೆ ಕೃತ್ಯ ಎಂದು ಪ್ರಾಥಮಿಕ ಹಂತದ ಮರಣೋತ್ತರ ಪರೀಕ್ಷಾ ವರದಿ ತಿಳಿಸಿದೆ.

ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ತಲೆ, ಕೈ ಹಾಗೂ ಕುತ್ತಿಗೆಯಲ್ಲಿ ಮಾರಕಾಸ್ತ್ರ ಗಳಿಂದ ಕಡಿದ ಗಾಯಗಳಾಗಿವೆ ಎಂದು ಮರಣೋತ್ತರ ಪರೀಕ್ಷೆಯಿಂದ ದೃಢಪಟ್ಟಿದೆ ಎಂದು ವರದಿಯಾಗಿದೆ.

- Advertisement -

ಬುಧವಾರ ಬೆಳಗ್ಗೆ ಎಂದಿನಂತೆ ರಿಕ್ಷಾ ಸಹಿತ ಮನೆಯಿಂದ ತೆರಳಿದ್ದ ಇವರು ಅಂದು ಮನೆಗೆ ಬಾರದೆ ನಾಪತ್ತೆಯಾಗಿದ್ದರು. ಪತ್ನಿ ಕರೆ ಮಾಡಿದಾಗ ಮೊಬೈಲ್ ಸಂಪರ್ಕಕ್ಕೆ ಸಿಗದ ಕಾರಣ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಯುತ್ತಿದ್ದಂತೆ ಗುರುವಾರ ರಾತ್ರಿ ಕೇರಳ- ಕರ್ನಾಟಕ ಗಡಿ ಭಾಗದ ಕುಂಜತ್ತೂರು ಪದವು ಎಂಬಲ್ಲಿನ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಗಾಂಜಾ ವ್ಯಸನಿಗಳು ಶರೀಫ್ ರ ರಿಕ್ಷಾವನ್ನು ಬಾಡಿಗೆಗೆ ಗೊತ್ತು ಮಾಡಿಕೊಂಡು ಹೋಗಿ ಬಳಿಕ ಯಾವುದೋ ಕಾರಣಕ್ಕೆ ಅವರನ್ನು ಕೊಲೆಗೈದಿರಬಹುದು ಎಂದು ಮೃತರ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.

ಈ ಪ್ರದೇಶದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ. ಜೂಜಾಟ ಆಟೋ ಚಾಲಕನ ಕೊಲೆಗೆ ಕಾರಣವಾಗಿದೆಯೇ ಅಥವಾ ಮಾದಕ ವ್ಯಸನಿ ಗಳು ಬಾಡಿಗೆಗೆ ಕರೆ ದೊಯ್ದು ಈ ಕೃತ್ಯ ನಡೆಸಿದ್ದಾರೆಯೇ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಂಜೇಶ್ವರ ಠಾಣಾ ಸರ್ಕಲ್ ಇನ್ ಸ್ಪೆಕ್ಟರ್ ಅನೂಪ್ ಕುಮಾರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

- Advertisement -


Must Read

Related Articles