ಕ್ವಿಟ್ ಇಂಡಿಯಾ ಚಳವಳಿ ವಾರ್ಷಿಕೋತ್ಸವ: ತುಷಾರ್ ಗಾಂಧಿ ವಶಕ್ಕೆ ಪಡೆದ ಪೊಲೀಸರು!

Prasthutha|

ಮುಂಬೈ: ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರನ್ನು ವಶಕ್ಕೆ ಪಡೆಯಲಾಗಿದೆ.

- Advertisement -

ಮಹಾತ್ಮಾ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರನ್ನು ಮುಂಬೈನ ಸಾಂತಾಕ್ರೂಜ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಈ ಬಗ್ಗೆ ಅವರೇ ಟ್ವೀಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಕ್ವಿಟ್ ಇಂಡಿಯಾ ಚಳವಳಿಯ ವಾರ್ಷಿಕೋತ್ಸವವನ್ನು ಆಚರಿಸಲು ನಾನು ಹೊರಗೆ ಹೋಗಿದ್ದೆ. ಈ ವೇಳೆ ನನ್ನನ್ನುಸಾಂತಾಕ್ರೂಜ್ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

- Advertisement -

Join Whatsapp