ನವದೆಹಲಿ: ಹಿಂದಿ ಕಿರುತೆರೆ ನಟ ರಿತುರಾಜ್ ಸಿಂಗ್ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.
ಅವರಿಗೆ 59 ವರ್ಷ ವಯಸ್ಸಾಗಿತ್ತು.
ನಟ ಅಮಿತ್ ಬೆಹ್ಲ್ ಮಾಧ್ಯಮಕ್ಕೆ ಈ ಬಗ್ಗೆ ಮಾಹಿತಿ ನೀಡಿ ರಿತುರಾಜ್ ಸಿಂಗ್ ಅವರು 12:30ಕ್ಕೆ ನಿಧನರಾದರು. ಹಲವು ದಿನಗಳಿಂದ ಅಸ್ವಸ್ಥರಾಗಿದ್ದರು. ಪ್ಯಾಂಕ್ರಿಯಾಟಿಕ್ ಸಮಸ್ಯೆಯಿಂದ 15 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆಮೇಲೆ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದರು. ಮತ್ತೆ ಈ ಸಮಸ್ಯೆಯಿಂದ ಅಹಿತಕರ ಘಟನೆ ಸಂಭವಿಸಿದೆ ಎಂದು ತಿಳಿಸಿದ್ದಾರೆ. ನಟನ ನಿಧನಕ್ಕೆ ಆಪ್ತರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.