ಮಂಡ್ಯ: ಬಿಟ್ಟಿರಲಾರದ ನಂಟು; ಆತ್ಮಹತ್ಯೆಗೆ ಶರಣಾದ ಅವಳಿ ಸೋದರಿಯರು!

Prasthutha: July 5, 2021

ಮಂಡ್ಯ: ಮದುವೆಯಾದರೆ ಬೇರೆ ಬೇರೆಯಾಗುತ್ತೇವೆ ಎಂಬ ಆತಂಕದ ಕಾರಣಕ್ಕೆ ಅವಳಿ ಸೋದರಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಹಣಸನಹಳ್ಳಿ ಗ್ರಾಮದ ಸುರೇಶ್ ಮತ್ತು ಯಶೋಧ ದಂಪತಿಯ ಪುತ್ರಿಯರಾದ ದೀಪಿಕಾ ಮತ್ತು ದಿವ್ಯಾ (19  ವರ್ಷ) ಆತ್ಮಹತ್ಯೆ ಮಾಡಿಕೊಂಡ ಸೋದರಿಯರಾಗಿದ್ದಾರೆ.

ಚಿಕ್ಕ ವಯಸ್ಸಿನಿಂದ ಈ ಸೋದರಿಯರು ಅನ್ಯೋನ್ಯವಾಗಿದ್ದು ಒಬ್ಬರನ್ನೊಬ್ಬರು ಬಿಟ್ಟಿರಲಿಲ್ಲ. ಆದರೆ ಇದೀಗ ಪೋಷಕರು ಇಬ್ಬರನ್ನೂ ಬೇರೆ ಬೇರೆ ಮನೆಗೆ ವಿವಾಹ ಮಾಡಿಕೊಡಲು ತೀರ್ಮಾನಿಸಿದ್ದಾರೆ. ಇದರಿಂದ ತಾವು ಬೇರೆಯಾಗುತ್ತೇವೆ ಎಂದು ಆತಂಕಗೊಂಡ ಇಬ್ಬರೂ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಅರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ