ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಮೃತ್ಯು

Prasthutha|

ಮಂಡ್ಯ: ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -


ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಸಾವನ್ನಪ್ಪಿದ ಕಂದಮ್ಮಗಳು.


ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್ ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್ ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್ಕ್ರೀಂ ತಿಂದಿದ್ದರು. ಐಸ್ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ.

Join Whatsapp