ಚಿತ್ರದುರ್ಗದ: 5 ಅಸ್ಥಿಪಂಜರ ಕೇಸ್‌ಗೆ ಟ್ವಿಸ್ಟ್‌

Prasthutha|

ಚಿತ್ರದುರ್ಗ: ನಗರದ ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೇ ಬೆಂಗಳೂರು ರಸ್ತೆಯ ಕಾರಾಗೃಹ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ 5 ಅಸ್ಥಿಪಂಜರಗಳ ಸಿಕ್ಕಿ ಸುದ್ದಿಯಾಗಿತ್ತು. ಇದಕ್ಕೆ ಸಂಬಂಧಿಸಿ ಬಿಗ್ ಟ್ವಿಸ್ಟ್‌ ಸಿಕ್ಕಿದ್ದು, ಅಸ್ಥಿಪಂಜರ ಸಿಕ್ಕ ಪಾಳು ಬಿದ್ದ ಮನೆಯಲ್ಲಿ ಡೆತ್ ನೋಟ್‌ ಕೂಡ ಪತ್ತೆಯಾಗಿದೆ ಎಂದು ಮಾಹಿತಿ ಬಂದಿದೆ.

- Advertisement -

ಐದು ಮಾನವ ಅಸ್ಥಿಪಂಜರಗಳ ಪತ್ತೆಗೆ ಹುಡುಕಾಟ ನಡೆಸಿದ ಪೊಲೀಸರಿಗೆ ಡೆತ್ ನೋಟ್ ಪತ್ತೆಯಾಗಿದ್ದು, ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದಾಗಿದೆಯೆಂದು ಶಂಕೆಗೆ ಬಲ‌ ನೀಡಿದೆ ಎಂದು ಹೇಳಲಾಗಿದೆ.

ಮನೆಯ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಮನೆಯ ಸುತ್ತಮುತ್ತ ಬ್ಯಾರಿಕೇಡ್ ಹಾಕಿ, ಪೊಲೀಸ್ ಸರ್ಪಗಾವಲು ನಿಯೋಜಿಸಲಾಗಿದೆ.

Join Whatsapp