Home ಟಾಪ್ ಸುದ್ದಿಗಳು ಸಾರ್ವಜನಿಕರ ನಂಬಿಕೆಗೆ ಅರ್ಹವಾಗಬೇಕಾದರೆ ಟ್ವಿಟರ್ ರಾಜಕೀಯವಾಗಿ ತಟಸ್ಥವಾಗಿರಬೇಕು: ಎಲಾನ್ ಮಸ್ಕ್

ಸಾರ್ವಜನಿಕರ ನಂಬಿಕೆಗೆ ಅರ್ಹವಾಗಬೇಕಾದರೆ ಟ್ವಿಟರ್ ರಾಜಕೀಯವಾಗಿ ತಟಸ್ಥವಾಗಿರಬೇಕು: ಎಲಾನ್ ಮಸ್ಕ್

ವಾಷಿಂಗ್ಟನ್: ಟ್ವಿಟರ್ ಸಾರ್ವಜನಿಕರ ನಂಬಿಕೆಗೆ ಅರ್ಹವಾಗಬೇಕಾದರೆ ಅದು ರಾಜಕೀಯವಾಗಿ ತಟಸ್ಥವಾಗಿರಬೇಕು ಎಂದು ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಹೇಳಿದ್ದಾರೆ.

ಎಲಾನ್ ಮಸ್ಕ್ ಟ್ವಿಟರ್ ಮೇಲೆ ಹಿಡಿತ ಸಾಧಿಸಿದ ಬೆನ್ನೆಲ್ಲೇ ಮೈಕ್ರೋಬ್ಲಾಗಿಂಗ್ ಸೈಟ್ ಸಾರ್ವಜನಿಕರು ನಂಬಿಕೆಗೆ ಅರ್ಹವಾಗಬೇಕಾದರೆ ಅದು ರಾಜಕೀಯವಾಗಿ ತಟಸ್ಥವಾಗಿರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಸೋಮವಾರ 44 ಬಿಲಿಯನ್ ಡಾಲರ್ (3.36 ಲಕ್ಷ ಕೋಟಿ) ಮೊತ್ತಕ್ಕೆ ಟ್ವಿಟರ್ ನ ಪೂರ್ತಿ ಷೇರು ಎಲಾನ್ ಮಸ್ಕ್ ಪಾಲಾಗಿದೆ.

Join Whatsapp
Exit mobile version