ಮಂಗಳೂರು: ಇಂದು ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯದಲ್ಲಿ ಎರಡನೇ ಸ್ಥಾನಗಳಿಸಿದ್ದಾರೆ.
ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಮರ್ಥ್ ವಿಶ್ವನಾಥ್ ಜೋಶಿ (595) ಹಾಗೂ ವಿಜ್ಞಾನ ವಿಭಾಗದ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. (597) ಅಂಕ ಪಡೆದಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ಇಬ್ಬರು ವಿದ್ಯಾರ್ಥಿಗಳಿಗೆ ತಲಾ 1 ಲಕ್ಷ ರೂ. ನಗದು ಬಹುಮಾನವನ್ನು ಘೋಷಿಸಿದ್ದಾರೆ.