ಜೈನಮುನಿಯ ಹತ್ಯೆ ಪ್ರಕರಣ: ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

Prasthutha|

ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದ್ದು, ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ.

- Advertisement -


ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದ್ದು, ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ.


ಇನ್ನು ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ.