Home ಟಾಪ್ ಸುದ್ದಿಗಳು ಜೈನಮುನಿಯ ಹತ್ಯೆ ಪ್ರಕರಣ: ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಜೈನಮುನಿಯ ಹತ್ಯೆ ಪ್ರಕರಣ: ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಬೆಳಗಾವಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆಯಾಗಿರುವುದು ಬೆಳಕಿಗೆ ಬಂದಿದ್ದು, ಇದೀಗ ರಾಯಬಾಗ ತಾಲೂಕಿನ ಖಟಕಬಾವಿ ಗ್ರಾಮದ ಗದ್ದೆಯ ಕೊಳವೆಬಾವಿಯಲ್ಲಿ ಜೈನಮುನಿ ಮೃತದೇಹ ಪತ್ತೆಯಾಗಿದೆ.


ಸೀರೆ, ಟವೆಲ್ ಸೇರಿ ಇತರೆ ಬಟ್ಟೆಗಳಿಂದ ಸುತ್ತಿ ಸುಮಾರು 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಕತ್ತರಿಸಿ ಎಸೆಯಲಾಗಿದ್ದು, ಈವರೆಗೆ ಮೃತದೇಹದ ಒಟ್ಟು ಐದು ಭಾಗಗಳನ್ನು ವೈದ್ಯಕೀಯ ಸಿಬ್ಬಂದಿ ಹೊರತೆಗೆದಿದ್ದಾರೆ.


ಇನ್ನು ಬೆಳಗ್ಗೆ 6 ಗಂಟೆಯಿಂದ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸಿದ ಸಿಬ್ಬಂದಿಗಳು ಸತತ ಒಂಬತ್ತು ಗಂಟೆಗಳ ಕಾಲ ಕಾರ್ಯಾಚರಣೆ ಬಳಿಕ ಜೈನಮುನಿ ಮೃತದೇಹ ಪತ್ತೆ ಮಾಡಿದ್ದಾರೆ.

Join Whatsapp
Exit mobile version