ಆಂಬರ್ ಗ್ರೀಸ್ ಮಾರಾಟ ಯತ್ನ: ಇಬ್ಬರ ಬಂಧನ

Prasthutha: January 28, 2022
ಸಾಂದರ್ಭಿಕ ಚಿತ್ರ

ಬೆಂಗಳೂರು: ಬನಶಂಕರಿಯ ಬನಗಿರಿ ಬಳಿ ಆಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಯಶಸ್ವಿಯಾಗಿದ್ದಾರೆ.


ಬನಶಂಕರಿ 2ನೇ ಹಂತದ ಮುಹಮ್ಮದ್ ರಿಯಾಜ್ ಅಹ್ಮದ್ (58) ಹಾಗೂ ಮುಹಮ್ಮದ್ ಗೌಸ್ (51) ಬಂಧಿತ ಆರೋಪಿಗಳು. ಇವರಿಂದ ಕೋಟ್ಯಂತರ ಬೆಲೆಬಾಳುವ 3 ಕೆಜಿ 600 ಗ್ರಾಂ ತೂಕದ ಅಂಬರ್ ಗ್ರೀಸ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಳೆದ ಜ. 26ರಂದು ದಕ್ಷಿಣ ಪೊಲೀಸ್ ವಿಭಾಗ ವ್ಯಾಪ್ತಿಯ ಬನಶಂಕರಿ 3ನೇ ಹಂತದ ಬನಗಿರಿ ನಗರದಲ್ಲಿ ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.


ಹೊರ ರಾಜ್ಯಗಳಿಂದ ಅಂಬರ್ ಗ್ರೀಸ್ ಖರೀದಿಸಿ ನಗರದಲ್ಲಿ ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!