ಮಂಗಳೂರು : ನಿಷೇಧಿತ LSD ಡ್ರಗ್ ಅಕ್ರಮವಾಗಿ ಸಾಗಿಸುತ್ತಿದ್ದ ಇಬ್ಬರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಕೇರಳದ ಕ್ಯಾಲಿಕಟ್ ನಿವಾಸಿ ಮಹಮ್ಮದ್ ಅಜಿನಾಷ್ ಮತ್ತೋರ್ವನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಮಾದಕ ವಸ್ತುಗಳ ಮೇಲಿನ ಯುದ್ಧ ಮುಂದುವರೆದಿದೆ. ಮಂಗಳೂರು ನಗರ ಪೊಲೀಸರು 20 ಲಕ್ಷಕ್ಕೂ ಹೆಚ್ಚು ಮೌಲ್ಯದ 840 LSD ಸ್ಟ್ರಿಪ್ಸ್ ಗಳನ್ನು ವಶಪಡಿಸಿಕೊಂಡಿದ್ದು, 2 ಜನ ಆರೋಪಿತರನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಗಳಿಗೆ 10 ಸಾವಿರ ಬಹುಮಾನ ಘೋಷಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್ ಹೇಳಿದ್ದಾರೆ.