ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚ ಬೇಡಿಕೆ ಇಟ್ಟಿದ್ದಾರೆಂದು ಆರೋಪಿ ರಾಜ್ಯಪಾಲ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ.
ಕೃಷಿ ಇಲಾಖೆ ಸಚಿವರ ವಿರುದ್ಧ ನಕಲಿ ಪತ್ರ ಸೃಷ್ಟಿಸಿದ ಆರೋಪ ಮೇರೆಗೆ ಕೆ.ಆರ್.ಪೇಟೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕಾರಿ ಸುದರ್ಶನ್ ಎನ್ನುವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಇದೀಗ ಕೋರ್ಟ್, ಆರೋಪಿಗಳನ್ನು 3 ದಿನ ಪೊಲೀಸರ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.