Home ಟಾಪ್ ಸುದ್ದಿಗಳು ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಇಬ್ಬರ ಬಂಧನ

ಬಾಬಾ ಸಿದ್ದೀಕಿ ಹತ್ಯೆ ಪ್ರಕರಣ: ಇಬ್ಬರ ಬಂಧನ

ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಮತ್ತು ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಕರ್ನೈಲ್ ಸಿಂಗ್ ಮತ್ತು ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ.

ಕರ್ನೈಲ್ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಧರ್ಮರಾಜ್ ಹರ್ಯಾಣದವನು ಎನ್ನಲಾಗಿದೆ.

ವಿಚಾರಣೆ ವೇಳೆ ಆರೋಪಿಗಳು ತಮ್ಮನ್ನು ಬಿಷ್ಣೋಯ್ ಗ್ಯಾಂಗ್‌ನ ಸದಸ್ಯರು ಎಂದು ಗುರುತಿಸಿಕೊಂಡಿದ್ದಾರೆ.

ಆರೋಪಿಗಳು ಕಳೆದ 25-30 ದಿನಗಳಿಂದ ಈ ಕೃತ್ಯ ಎಸಗಲು ಸಿದ್ಧತೆ ನಡೆಸಿದ್ದರು. ಮೂವರು ಆರೋಪಿಗಳು ಆಟೋ ರಿಕ್ಷಾದ ಮೂಲಕ ಬಾಂದ್ರಾ ಪೂರ್ವಕ್ಕೆ ಬಂದಿದ್ದರು.

ಮೂವರು ಆರೋಪಿಗಳು ಅಲ್ಲಿ ಸ್ವಲ್ಪ ಸಮಯ ಕಳೆದರು ಮತ್ತು ಬಾಬಾ ಸಿದ್ದಿಕಿ ಬರುವವರೆಗೆ ಕಾಯುತ್ತಿದ್ದರು. ಇದಾದ ಬಳಿಕ ಬಾಬಾ ಸಿದ್ದಿಕಿಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಬಾಬಾ ಸಿದ್ದಿಕಿ ಅವರನ್ನು ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಶನಿವಾರ ರಾತ್ರಿ ಹತ್ಯೆ ಮಾಡಲಾಗಿದೆ. ಅವರ ಮೇಲೆ ಮೂವರು ಗುಂಡು ಹಾರಿಸಿದ್ದಾರೆ.

ನಿರ್ಮಲ್ ನಗರದ ಕೋಲ್ಗೇಟ್ ಗ್ರೌಂಡ್ ಬಳಿ ಇರುವ ಬಾಬಾ ಸಿದ್ದಿಕಿ ಪುತ್ರ ಹಾಗೂ ಶಾಸಕ ಜೀಶಾನ್ ಸಿದ್ದಿಕಿ ಅವರ ಕಚೇರಿಯ ಹೊರಗೆ ಈ ಘಟನೆ ನಡೆದಿದೆ. ಘಟನೆ ನಡೆದ ತಕ್ಷಣ ಇಬ್ಬರನ್ನು ಬಂಧಿಸಲಾಗಿದೆ.

ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ಕ್ಷೇತ್ರವನ್ನು ವಿಧಾನಸಭೆಯಲ್ಲಿ ಮೂರು ಬಾರಿ ಪ್ರತಿನಿಧಿಸಿದ್ದರು. ಮುಂಬೈನ ಪ್ರಮುಖ ಮುಸ್ಲಿಂ ನಾಯಕ ಸಿದ್ದಿಕಿ, ಹಲವಾರು ಬಾಲಿವುಡ್ ತಾರೆಯರ ನಿಕಟವರ್ತಿಯಾಗಿದ್ದರು.

ಬಾಬಾ ಸಿದ್ದೀಕಿ ಹತ್ಯೆ ಚುನಾವಣೆಯ ಹೊಸ್ತಿನಲ್ಲಿರುವ ಮಹಾರಾಷ್ಟ್ರ ರಾಜಕೀಯದಲ್ಲಿ‌ ಸಂಚಲನ ಸೃಷ್ಟಿಸಿದೆ.

Join Whatsapp
Exit mobile version