ನಕಲಿ ಪಾಸ್​ಪೋರ್ಟ್​ ಬಳಸಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾ ಪ್ರಜೆಗಳ ಬಂಧನ

Prasthutha|

ಬೆಂಗಳೂರು: ನಕಲಿ ಭಾರತೀಯ ಪಾಸ್‌ಪೋರ್ಟ್ ಮಾಡಿಸಿಕೊಂಡು ವಿಮಾನದಲ್ಲಿ ಬೆಂಗಳೂರಿಗೆ ಬಂದಿದ್ದ ಇಬ್ಬರು ಬಾಂಗ್ಲಾದೇಶದ ಪ್ರಜೆಗಳನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

- Advertisement -

ಲಿಯಾಕತ್ ಅಲಿ ಮತ್ತು ರಿಜಾವುಲ್ ಶೇಖ್​ ಬಂಧಿತ ಆರೋಪಿಗಳಾಗಿದ್ದಾರೆ.
ಇಬ್ಬರು ಆರೋಪಿಗಳು ಏಪ್ರಿಲ್ 7 ರ ಶುಕ್ರವಾರ ಸಿಂಗಾಪುರದಿಂದ ಇಂಡಿಗೊ ವಿಮಾನ 6 ಇ 1006 ನಲ್ಲಿ ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಇಬ್ಬರ ಪಾಸ್​ಪೋರ್ಟ್​ಗಳನ್ನು ಪರಿಶೀಲಿಸಿದಾಗ ಬೇರೆಯವರ ಹೆಸರಿನಲ್ಲಿ ಭಾರತೀಯ ಪಾಸ್​ಪೋರ್ಟ್ ಹೊಂದಿರುವುದು ಕಂಡುಬಂದಿದೆ. ಬಳಿಕ ಅವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp