ಬೆಳಗಾವಿ: ಎರಡು ಬೈಕ್​ಗಳ ನಡುವೆ ಡಿಕ್ಕಿ| ಮೂವರು ಸ್ಥಳದಲ್ಲೇ ಮೃತ್ಯು

Prasthutha|

ಬೆಳಗಾವಿ: ಎರಡು ಬೈಕ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಬಳಿ ನಡೆದಿದೆ.

ಎರಡು ಬೈಕ್‌ಗಳಲ್ಲಿ ಒಟ್ಟು ನಾಲ್ಕು ಜನ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ರಾಯಬಾಗ ಹಾರೂಗೇರಿ ಮುಖ್ಯರಸ್ತೆಯಲ್ಲಿ ಬೈಕ್​ಗಳ ನಡುವೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -

ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವ ಬೈಕ್ ಸವಾರನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.

- Advertisement -