ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರಿಗೆ ಗಂಭೀರ ಗಾಯ

Prasthutha|

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಗಾಯಾಗೊಂಡ ಬಾಲಕರು ಸುಪ್ರೀತ್(12) ಮತ್ತು ಚಂದ್ರು(10) ಎಂದು ತಿಳಿದುಬಂದಿದ್ದು, ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ

ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ಈ ಘಟನೆ ನಡೆದಿದ್ದು, ಪಾರಿವಾಳ ಹಿಡಿಯಲು ಯತ್ನಿಸುತ್ತಿದ್ದಾಗ  ಆಕಸ್ಮಿಕವಾಗಿ ಹೈಟೆನ್ಶನ್ ವಿದ್ಯುತ್ ತಂತಿ ತಾಗಿದ್ದರಿಂದ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದಾರೆ.

- Advertisement -

ಇಬ್ಬರಿಗೂ ತೀವ್ರತರದ ಸುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ನಡೆಯುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

Join Whatsapp