ನೀರಿನ ಸಂಪ್ ಸ್ವಚ್ಛತೆ ವೇಳೆ ಸಹೋದರರಿಬ್ಬರು ಮೃತ್ಯು

Prasthutha|

ಆನೇಕಲ್: ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.

- Advertisement -

ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತರು.


ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ ಕಂಪನಿ ಮಾಲೀಕ ಹಾಗೂ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀನಿವಾಸ್ ರೆಡ್ಡಿ ಎಂಬುವವರ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಸಂಜೆ ಸಂಪ್ ನಲ್ಲಿ ಕ್ಲೀನ್ ಮಾಡಲು ಕಾರ್ಮಿಕರು ಇಳಿದಿದ್ದರು. ಆ್ಯಸಿಡ್ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

Join Whatsapp