ಎರಡು ಕಾರುಗಳು ಮುಖಾಮುಖಿ ಡಿಕ್ಕಿ; ಐವರು ದಾರುಣ ಸಾವು

Prasthutha|

ಮಂಡ್ಯ: ನಿಯಂತ್ರಣ ಕಳೆದುಕೊಂಡ ಕಾರು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ‌ ಐವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನಾಗತಿಹಳ್ಳಿ ಬಳಿ ನಡೆದಿದೆ.

- Advertisement -

ಮೃತರೆಲ್ಲರೂ ತಮಿಳುನಾಡು ಮೂಲದವರು ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಮದುವೆ ಸಮಾರಂಭ ಮುಗಿಸಿಕೊಂಡು ಹಾಸನ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ವಿಭಜಕ ಕ್ರಾಸ್ ಆಗಿ ಹಾಸನದಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಎರಡು ಕಾರುಗಳಲ್ಲಿದ್ದ ಒಟ್ಟು ಐವರು ಸ್ಥಳದಲ್ಲೇ ಸಾವನ್ನಪ್ಪಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

- Advertisement -

ಐವರ ಮೃತದೇಹಗಳನ್ನು ಬೆಳ್ಳೂರು ಸಮೀಪದ ಆದಿಚುಂಚನಗಿರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ, ಗಾಯಾಳುಗಳನ್ನು ಬೆಳ್ಳೂರು ಕ್ರಾಸ್‌ನಲ್ಲಿರುವ BGS ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಎಸ್ಪಿ ಎನ್. ಯತೀಶ್, ಡಿವೈಎಸ್ಪಿ ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಸುಧಾಕರ್ ಸೇರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Join Whatsapp