ಉತ್ತರ ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬಂದರೆ ಇಬ್ಬರು ಸಿಎಂ, ಮೂವರು ಡಿಸಿಎಂ: ಉವೈಸಿ

Prasthutha|

ಲಖನೌ: ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರು ಬಾಬು ಸಿಂಗ್ ಕುಶ್ವಾಹಾ ದೊಂದಿಗೆ ಉತ್ತರ ಪ್ರದೇಶದಲ್ಲಿ ತಮ್ಮ ಮೈತ್ರಿಯನ್ನು ಶನಿವಾರ ಘೋಷಿಸಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ  ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ತಮ್ಮ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಒಬ್ಬರು ಒಬಿಸಿ ಸಮುದಾಯದವರು ಮತ್ತು ಇನ್ನೊಬ್ಬರು ದಲಿತ ಸಮುದಾಯದ ಇಬ್ಬರು ಮುಖ್ಯಮಂತ್ರಿಗಳಾಗುತ್ತಾರೆ. ಮುಸ್ಲಿಂ ಸಮುದಾಯದವರು ಸೇರಿದಂತೆ 3 ಉಪಮುಖ್ಯಮಂತ್ರಿಗಳು ಇರುತ್ತಾರೆ ಎಂದು ತಿಳಿಸಿದರು.

ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27, ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

Join Whatsapp