ರಾಯಚೂರು: ಸಿರವಾರದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದಡಿ ಇಬ್ಬರು ಕಾನ್ಸ್ ಟೇಬಲ್ ಗಳನ್ನು ಅಮಾನತುಗಳಿಸಿ ರಾಯಚೂರು ಎಸ್ ಪಿ ಬಿ.ನಿಖಿಲ್ ಆದೇಶಿಸಿದ್ದಾರೆ.
ಸಿರವಾರ ಠಾಣೆಯ ಕಾನ್ಸ್ ಟೇಬಲ್ ಗಳಾದ ಇಸ್ಮಾಯಿಲ್ ಹಾಗೂ ರೇವಣಸಿದ್ದ ಅವರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕರ್ತವ್ಯಲೋಪ ಹಿನ್ನಲೆ ಅಮಾನತು ಮಾಡಲಾಗಿದೆ. ಪ್ರಕರಣದ ಸಂಬಂಧ ಮೂವರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸಿರವಾರ ಪಟ್ಟಣದ ನಿವಾಸಿ ಆರೋಪಿ ಆಕಾಶ್ (23) ತಪ್ಪೊಪ್ಪಿಕೊಂಡಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.