ಕೊಪ್ಪಳದ ಹಳ್ಳದಲ್ಲಿ ಕೊಚ್ಚಿ ಹೋದ ಇಬ್ಬರು ಪೊಲೀಸರು

Prasthutha|

ಕೊಪ್ಪಳ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಮಳೆಗೆ ಹಳ್ಳದಲ್ಲಿ ಇಬ್ಬರು ಪೊಲೀಸರು ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.

- Advertisement -


ಮುಂಡರಗಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿ ತೊಡಿಹಾಳ ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ನಾಪತ್ತೆಯಾದ ಸಿಬ್ಬಂದಿಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ.


ಇನ್ನು ಮಳೆಯಿಂದ ಕೆರೆಗಳು. ರಸ್ತೆಗಳು ತುಂಬಿ ಹರಿಯುತ್ತಿದೆ. ಸೇತುವೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಗದ್ದೆ ತೋಟಗಳಿಗೆ ನೀರು ನುಗ್ಗಿ ರೈತರು ಹೈರಾಣಾಗಿದ್ದಾರೆ.

Join Whatsapp