ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನ

ಚಿಕ್ಕಮಗಳೂರು: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿ ಎರಡು ಹಸುಗಳು ಸಜೀವ ದಹನವಾದ ಘಟನೆ ಅಜ್ಜಂಪುರ ತಾಲೂಕಿನ ಶಿವನಿ ಸಮೀಪದ ಗಡಿರಂಗಾಪುರ ಗ್ರಾಮದಲ್ಲಿ  ನಡೆದಿದೆ.

ಮೂರ್ತಿ ಎಂಬವರಿಗೆ ಸೇರಿದ ಕೊಟ್ಟಿಗೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕೊಟ್ಟಿಗೆಯಲ್ಲಿದ್ದ ಎರಡು ದೊಡ್ಡ ಹಸುಗಳು ಓಡಿಹೋಗಿ ಜೀವ ಉಳಿಸಿಕೊಂಡಿವೆ. ಮತ್ತೆರಡು ಹಸುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ.

- Advertisement -

ನಾಲ್ಕೈದು ದಿನದಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದುಷ್ಕರ್ಮಿಗಳು ಬೆಂಕಿ ಹಾಕಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

- Advertisement -