Home ಟಾಪ್ ಸುದ್ದಿಗಳು ಪಂಚರಾಜ್ಯ ಫಲಿತಾಂಶ; ಇಬ್ಬರು ಹಾಲಿ, ಐವರು ಮಾಜಿ ಮುಖ್ಯಮಂತ್ರಿಗಳಿಗೆ ಸೋಲಿನ‌ ಕಹಿಯುಣಿಸಿದ ಮತದಾರ !

ಪಂಚರಾಜ್ಯ ಫಲಿತಾಂಶ; ಇಬ್ಬರು ಹಾಲಿ, ಐವರು ಮಾಜಿ ಮುಖ್ಯಮಂತ್ರಿಗಳಿಗೆ ಸೋಲಿನ‌ ಕಹಿಯುಣಿಸಿದ ಮತದಾರ !

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶ, ಗೋವಾ, ಮಣಿಪುರ ಮತ್ತು ಉತ್ತರಾಖಂಡ್ ರಾಜ್ಯಗಳಲ್ಲಿ ಬಿಜೆಪಿ ತನ್ನ ಗೆಲುವಿನ ಬಾವುಟ ಹಾರಿಸಿದ್ದು, ಪಂಜಾಬ್’ನಲ್ಲಿ ಒಳಜಗಳದಿಂದ ನಲುಗಿ ಹೋಗಿದ್ದ ಕಾಂಗ್ರೆಸ್’ಅನ್ನು
ಆಮ್ ಆದ್ಮಿಯ ‘ಪೊರಕೆ’ ಗುಡಿಸಿ ಬದಿಗೆ ಸರಿಸಿದೆ.
ಈ ಬಾರಿಯ ಚುನಾವಣಾ ಫಲಿತಾಂಶವು ಹಲವು ಅಚ್ಚರಿಗೆ ಕಾರಣವಾಗಿದ್ದು, ಇಬ್ಬರು ಹಾಲಿ ಮತ್ತು ಐವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವು ಹಿರಿಯ ಹಾಗೂ ಪ್ರಮುಖ ನಾಯಕರು ಚುನಾವಣಾ ಅಖಾಡದಲ್ಲಿ ಮಕಾಡೆ ಮಲಗಿದ್ದಾರೆ.
ಹಾಲಿ ಮುಖ್ಯಮಂತ್ರಿಗಳಾಗಿದ್ದ ಪಂಜಾಬ್’ನ ಚರಂಜಿತ್ ಸಿಂಗ್ ಚನ್ನಿ ಮತ್ತು ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ ಚುನಾವಣೆಯಲ್ಲಿ ಸೋತಿದ್ದಾರೆ.

ಪಂಜಾಬ್‌ನಲ್ಲಿ, ಆಮ್ ಆದ್ಮಿ ಪಕ್ಷ ಭರ್ಜರಿ ಯಶಸ್ಸು ಸಾಧಿಸಿದರೆ, ಇದೇ ರಾಜ್ಯದ ಮೂವರು ಮಾಜಿ ಮುಖ್ಯಮಂತ್ರಿಗಳಾದ ಪ್ರಕಾಶ್ ಸಿಂಗ್ ಬಾದಲ್, ಸಿಂಗ್ ಮತ್ತು ರಾಜಿಂದರ್ ಕೌರ್ ಭಟ್ಟಾಲ್ ಹಾಗೂ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ಸಿಂಗ್ ರಾವತ್ ಸೋಲಿನ ಕಹಿಯುಂಡಿದ್ದಾರೆ.
ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಮುಖ್ಯಸ್ಥ ಮತ್ತು ಪಂಜಾಬ್ ಮಾಜಿ ಉಪಮುಖ್ಯಮಂತ್ರಿ ಸುಖ್‌ಬೀರ್ ಬಾದಲ್ ಕೂಡ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯ ವಿರುದ್ಧ ಸೋಲು ಕಂಡಿದ್ದಾರೆ.

ಪಂಜಾಬ್ ಸರ್ಕಾರದ ಬಹುತೇಕ ಹಾಲಿ ಮತ್ತು ಮಾಜಿ ಮಂತ್ರಿಗಳು ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಗಳ ವಿರುದ್ಧ ಸೋತಿದ್ದಾರೆ.
ಗೋವಾದಲ್ಲಿ, ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾಗಿದ್ದ ಚರ್ಚಿಲ್ ಅಲೆಮಾವೊ, ಬೆನೌಲಿಮ್‌’ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದಾರೆ

ಗೋವಾದ ಮಾಜಿ ಇಬ್ಬರೂ ಉಪಮುಖ್ಯಮಂತ್ರಿಗಳೆದುರು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದಾರೆ. ಮನೋಹರ್ ಅಜಗಾಂವ್ಕರ್ ಕಾಂಗ್ರೆಸ್ ಅಭ್ಯರ್ಥಿ ದಿಗಂಬರ್ ಕಾಮತ್ ವಿರುದ್ಧ ಹಾಗೂ ಮತ್ತೊರ್ವ ಉಪಮುಖ್ಯಮಂತ್ರಿ ಚಂದ್ರಕಾಂತ್ ಕಾವ್ಲೇಕರ್ ಕ್ವಿಪೆಮ್‌’ನಿಂದ ಕಾಂಗ್ರೆಸ್ ಅಭ್ಯರ್ಥಿ ಅಲ್ಟೋನ್ ಡಿ’ಕೋಸ್ಟಾ ವಿರುದ್ಧ ಸೋತಿದ್ದಾರೆ.

Join Whatsapp
Exit mobile version