Home ಕರಾವಳಿ SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್.ಬಾಸ್ಕರ್ ಪ್ರಸಾದ್ ಮತ್ತು ಕಾರ್ಯದರ್ಶಿ ಆನಂದ ಮಿತ್ತಬೈಲ್ ರವರಿಂದ ಎರಡು ದಿನಗಳ...

SDPI ರಾಜ್ಯ ಪ್ರ.ಕಾರ್ಯದರ್ಶಿ ಬಿ.ಆರ್.ಬಾಸ್ಕರ್ ಪ್ರಸಾದ್ ಮತ್ತು ಕಾರ್ಯದರ್ಶಿ ಆನಂದ ಮಿತ್ತಬೈಲ್ ರವರಿಂದ ಎರಡು ದಿನಗಳ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

ಮಂಗಳೂರು : ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್ ನಾಳೆಯಿಂದ ಪಕ್ಷ ಸಂಘಟನೆಯ ನಿಮಿತ್ತ ದ.ಕ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಳಾಯಿ , ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು ಹಾಗೂ ಇತರ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವಂಬರ್ 17 ಮತ್ತು 18 ಎರಡುದಿನಗಳ ಕಾಲ ಬಾಸ್ಕರ್ ಪ್ರಸಾದ್ ನೇತ್ರತ್ವದ ತಂಡ ಜಿಲ್ಲಾ ಪ್ರವಾಸ ನಡೆಸಲಿದ್ದು ಈ ಸಂದರ್ಭದಲ್ಲಿ ವಿವಿಧ ಸ್ಥರದ ನಾಯಕರು,ದಲಿತ ಮುಖಂಡರು ಹಾಗೂ ಪ್ರಗತಿಪರ ನಾಯಕರನ್ನು ಬೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಹಾಗೂ,ಕಾರ್ಯಕರ್ತರ ಸಭೆ ಮತ್ತು 18 ನೆ ತಾರೀಖಿನಂದು ಸಂಜೆ ಉಳ್ಳಾಲದಲ್ಲಿ ಪಕ್ಷದ ಕಛೇರಿ ಮತ್ತು ಮಾಹಿತಿ ಕೇಂದ್ರದ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Join Whatsapp
Exit mobile version